





ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮಗು ಮೃತಪಟ್ಟಿದ್ದು ಗಂಭೀರ ಗಾಯಗೊಂಡಿದ್ದ ವೃದ್ದೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಶಾಝ್ಮಾ ಫಾತಿಮಾ (6ವ) ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಅಜ್ಜಿ ಝುಲೈಕಾ ಅವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.















