ಕಡಬ: ಇಲ್ಲಿನ ಸಂತೆಕಟ್ಟೆ ಬಳಿ ಇರುವ ಹಸಿಮೀನು ಮಾರುಕಟ್ಟೆಯ ಪ್ರಾಂಗಣದಲ್ಲಿ ಕಡಿಮೆ ದರ ಮೀನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಟ ನಡೆದ ಘಟನೆ ನ.1 ರಂದು ನಡೆದಿದೆ.
ಇಲ್ಲಿನ ಮೀನು ಮಾರುಕಟ್ಟೆಯಲ್ಲಿ ಎರಡು ತಂಡದವರು ಮೀನು ಮಾರಾಟ ಮಾಡುತ್ತಿದ್ದು, ಕೆಲ ದಿನಗಳಿಂದ ಮೀನು ಮಾರಾಟಕ್ಕೆ ಗ್ರಾಹಕರನ್ನು ಸೆಳೆಯುವ ವಿಚಾರದಲ್ಲಿ ಇತ್ತಂಡಗಳ ನಡುವೆ ಪೈಪೊಟಿ ಏರ್ಪಟ್ಟಿದೆ.
ನ.1ರಂದು ಯಾವುದೋ ವಿಚಾರಕ್ಕೆ ಸಂಬಂಧಿಸಿ ಎರಡು ಮೀನು ಮಾರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟ ನಡೆದಿದೆ. ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
