ಪುತ್ತೂರು:ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಪಾಣಾಜೆ ಸೂರಂಬೈಲು ಶಾಲಾ ಸಹ ಶಿಕ್ಷಕ ನಾಗೇಶ್ ಪಾಟಾಳಿ ಪೆರುವಾಯಿಯವರು ನೇಮಕಗೊಂಡಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಕಳೆದ 18 ವರ್ಷಗಳಿಂದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುವ ನಾಗೇಶ್ ಪಾಟಾಳಿಯವರು ನೆಲ್ಯಾಡಿ ಸಮೀಪ ಪುತ್ತಿಗೆ ಹಾಗೂ ಪಾಣಾಜೆಯ ಸೂರಂಬೈಲು ಸ.ಹಿ.ಪ್ರಾ ಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುವ ಇವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ತಾಲೂಕು ಘಟಕ ಪುತ್ತೂರು ಇದರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿ ನಡೆದ ಸಿಆರ್ಪಿ/ಬಿಆರ್ಪಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇಲ್ಲಿಗೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ.
