ಪುತ್ತೂರು:ದಿನನಿತ್ಯದಲ್ಲಿ ಕನ್ನಡವನ್ನು ಬಳಸಿದಷ್ಟ ಕನ್ನಡ ಬೆಳೆಯುತ್ತದೆ ಮತ್ತು ಉಳಿಯುತ್ತದೆ ಎಂದು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥ್ ಬಿ ಆರ್ ರವರು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಟರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜುನಾಥ್ ಬಿ ಆರ್ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ರವಿರಾಜ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ಹೆಚ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕು|ಕೀರ್ತನ ಸ್ವಾಗತಿಸಿ ವಂದಿಸಿದರು.
