ನೆಲ್ಯಾಡಿ: ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ನ.1ರಂದು ನಡೆಯಿತು.
ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿದ್ದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ನೆಲ್ಯಾಡಿ ಲೀಜಿಯನ್ ಅಧ್ಯಕ್ಷ ಪ್ರಕಾಶ್ ಕೆ.ವೈ. ಶುಭಹಾರೈಸಿದರು. ಎಸ್ಡಿಎಂಸಿ ಅಧ್ಯಕ್ಷ ದಿನಕರ್ ಕೆ.ಎಚ್., ಮುಖ್ಯಗುರು ವೀಣಾ ಮಸ್ಕರನ್ನಾಸ್, ಸೀನಿಯರ್ ಚೇಂಬರ್ ನೆಲ್ಯಾಡಿ ಲೀಜಿಯನ್ ನಿಕಟಪೂರ್ವ ಅಧ್ಯಕ್ಷ ಶೀನಪ್ಪ ಎಸ್., ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕಡಬ ತಾಲೂಕು ಅಧ್ಯಕ್ಷ ವಿಮಲ್ ಕುಮಾರ್, ಜ್ಞಾನೋದಯ ಬೆಥನಿ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ ಗುರು ಜೋರ್ಜ್ ಕೆ. ತೋಮಸ್ ಉಪಸ್ಥಿತರಿದ್ದರು. ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಶಿಕ್ಷಕಿ ಮೋರಿ ಜೋನ್ ಹಾಗೂ ಇತರೇ ಶಿಕ್ಷಕರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಶಿಕ್ಷಕಿ ಪ್ರವೀಣ ಸ್ಟಾಗತಿಸಿ, ಶಿಕ್ಷಕಿ ರತಿಲತಾ ವಂದಿಸಿದರು.
