





ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು.



ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಸಹಿತ 33 ಜನ ಕಾರ್ಯಕರ್ತರು ರಕ್ತದಾನ ಮಾಡಿದರು.






ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷರಾದ ಡಾ. ಕೃಷ್ಣಪ್ರಸನ್ನ, ವಿಶ್ವ ಹಿಂದೂ ಪರಿಷದ್ ಪುತ್ತೂರು ಗ್ರಾಮಾಂತರ ಪ್ರಖಂಡ ಅಧ್ಯಕ್ಷರಾದ ಜಯಂತ್ ಶೆಟ್ಟಿ ಕಂಬಳತ್ತಡ್ಡ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸಹ ಸಂಯೋಜಕರಾದ ಪ್ರವೀಣ್ ಕಲ್ಲೇಗ, ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡು, ಬಜರಂಗದಳ ಗ್ರಾಮಾಂತರ ಪ್ರಖಂಡ ಸಂಯೋಜಕರಾದ ಕಿರಣ್ ರಾಮಕುಂಜ ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.











