ಬಡಗನ್ನೂರು: ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ನ.1ರಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ವಿಘ್ನೇಶ ಹಿರಣ್ಯ ವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಹಾಗೂ ಕನ್ನಡ ನಾಡಿನ ಬಗ್ಗೆ ಗೀತೆಗಳನ್ನು ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷ ಲಿಂಗಪ್ಪಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ, ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸುಮನ ಮಾತಾಜಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ರಾಜಗೋಪಾಲರು ಉಪಸ್ಥಿತರಿದ್ದು, ಕನ್ನಡ ನಾಡು ನುಡಿಯ ಬಗ್ಗೆ ಮಾತುಗಳನ್ನಾಡಿದರು. ಚಿತ್ರ ಮಾತಾಜಿ ಸ್ವಾಗತಿಸಿ, ಜಯಶ್ರೀ ಮಾತಾಜಿ ವಂದಿಸಿದರು ಲತಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಎಲ್ಲ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
