ಪುತ್ತೂರು: ಸ್ವಚ್ಚ ಭಾರತ ಸ್ವಸ್ಥ ಭಾರತ ಎನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯನ್ವಯ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್ಎಸ್ಎಸ್ ವಿಭಾಗದ ವಿದ್ಯಾರ್ಥಿಗಳು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಳದ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ನಡೆಸಿದರು.
ವಿದ್ಯಾರ್ಥಿಗಳಲ್ಲಿ ಮತ್ತು ಸ್ಥಳೀಯ ಜನರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸುವುದಕ್ಕಾಗಿ ನಡೆದ ಈ ಅಭಿಯಾನದಲ್ಲಿ 58 ಎನ್ಎಸ್ಎಸ್ ಸ್ವಯಂಸೇವಕರು ಮತ್ತು ಅಧಿಕಾರಿಗಳು ಭಾಗವಹಿಸಿದರು.
ಸ್ವಚ್ಚ ಸಮುದಾಯ ಮತ್ತು ಸಾಮಾಜಿಕ ಜವಾಬ್ಧಾರಿಯನ್ನು ಉತ್ತೇಜಿಸುವ ಈ ಕಾರ್ಯಕ್ರಮವನ್ನು ದೇವಳದ ಆಡಳಿತ ಮಂಡಳಿಯವರು ಶ್ಲಾಘಿಸಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.