ಬೆಟ್ಟಂಪಾಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಪ್ರಿಯದರ್ಶಿನಿ ಆಂಗ್ಲಮಾಧ್ಯಮ ಶಾಲೆ ಬೆಟ್ಟಂಪಾಡಿ ಆಶ್ರಯದಲ್ಲಿ 2025-26 ನೇ ಸಾಲಿನ ಪುತ್ತೂರು ಮತ್ತು ಕಡಬ ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ‘ಕ್ರೀಡಾದರ್ಶಿನಿ’ 2025-26 ನ.8 ಮತ್ತು 9ರಂದು ಬೆಟ್ಟಂಪಾಡಿ ಬಿಲ್ವಗಿರಿ ನವೋದಯ ಕ್ರೀಡಾಂಗಣದಲ್ಲಿ ಜರಗಲಿದೆ.
ಈ ಮೊದಲು ಇದೇ ಕ್ರೀಡಾಕೂಟವು ಅಕ್ಟೋಬರ್ 28 ಹಾಗೂ 29ರಂದು ನಿಗದಿಯಾಗಿತ್ತು. ಆದರೆ ಮಳೆಯ ಕಾರಣದಿಂದಾಗಿ ಕೊನೆ ಕ್ಷಣದಲ್ಲಿ ಕ್ರೀಡಾಕೂಟವನ್ನು ಮುಂದೂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದರು.
ಇದೀಗ ನ.8 ಮತ್ತು 9ರಂದು ಕ್ರೀಡಾಕೂಟವು ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಬೆಟ್ಟಂಪಾಡಿ ಬಿಲ್ವಗಿರಿ ಕ್ರೀಡಾಂಗಣದಲ್ಲಿ ನಡೆಸಲು ಸಕಲ ಸಿದ್ದತೆಗಳು ನಡೆಯುತ್ತಿವೆ.
