





ಪುತ್ತೂರು: ಶಿಕ್ಷಣ ಇಲಾಖಾವತಿಯಿಂದ ನ.3ರಂದು ನಡೆದ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ಭಾಷಣ, ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಸುದಾನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪುತ್ತೂರಿನಲ್ಲಿ ಆಯೋಜಿಸಲಾಗಿತ್ತು. ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ ನವೋದಯ ಪ್ರೌಢಶಾಲೆಯ ವಿದ್ಯಾರ್ಥಿನಿ 10ನೇ ತರಗತಿಯ ಆಯಿಷತ್ ಶಮ್ನಾ ದ್ವಿತೀಯ ಸ್ಥಾನವನ್ನು ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ 10ನೇತರಗತಿಯ ಧನ್ಯ ಶ್ರೀ ದ್ವಿತೀಯ ಸ್ಥಾನ ಗಳಿಸಿ, ಪ್ರಶಸ್ತಿ ಪತ್ರ ಹಾಗೂ 750 ರೂ. ನಗದು ಪುರಸ್ಕಾರಗಳನ್ನು ಪಡೆಯುವುದರೊಂದಿಗೆ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಸುಮಂಗಲಾ ಕೆ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿ ಸಹಕರಿಸಿದ್ದಾರೆ. ಶಾಲಾ ಮುಖ್ಯ ಗುರುಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.













