ಜಿಲ್ಲಾ ಮಟ್ಟದ ಕ್ರೀಡಾಕೂಟ : ಶ್ರೀವರ್ಣ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದ್ರೆ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ 100 ಮೀಟರ್ ಹರ್ಡಲ್ಸ್ ವಿಭಾಗದಲ್ಲಿ ಶ್ರೀವರ್ಣ ಪಿ.ಡಿ. ಅವರು ಬೆಳ್ಳಿಯ ಪದಕದೊಂದಿಗೆ ಮೈಸೂರಿನಲ್ಲಿ ನವೆಂಬರ್ 5ರಿಂದ 7ರ ತನಕ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿಯಾಗಿದ್ದಾರೆ.

ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಎಲಿಯಾಸ್ ಪಿಂಟೋ ಮತ್ತು ರಾಜೇಶ್ ಮೂಲ್ಯ ತರಬೇತಿ ನೀಡುತ್ತಿದ್ದಾರೆ. ಶ್ರೀವರ್ಣ ಅವರು ಬೆಳ್ಳಿಪ್ಪಾಡಿ ಗ್ರಾಮದ ಪಾಲೆತ್ತಡಿ ಶಿವಚಕ್ರ ನಿಲಯದ ಧರ್ಣಪ್ಪ ಗೌಡ ಹಾಗೂ ಮಮತಾ ದಂಪತಿಯ ಪುತ್ರಿ .

LEAVE A REPLY

Please enter your comment!
Please enter your name here