ಅಥ್ಲೆಟಿಕ್ ಕ್ರೀಡಾಕೂಟ: ಸಂತ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ಆಳ್ವಾಸ್ ಪ. ಪೂ.  ಕಾಲೇಜು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ಅಕ್ಟೋಬರ್ 30 ರಂದು ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ – 2025ರಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ  ಏಂಜಲಿಕಾ ಮೆಲನಿ ಪಿಂಟೋ, ಶ್ರೀವರ್ಣ ಪಿ. ಡಿ ಹಾಗೂ ನಿಹಾಲ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಏಂಜಲಿಕಾ ಮೆಲನಿ ಪಿಂಟೋ ಜಾವಲಿನ್ ಥ್ರೋದಲ್ಲಿ ದ್ವಿತೀಯ ಹಾಗೂ 4×100ಮೀ ರಿಲೇಯಲ್ಲಿ ತೃತೀಯ ಸ್ಥಾನವನ್ನು, ಪ್ರಥಮ ವಿಜ್ಞಾನ ವಿಭಾಗದ ಶ್ರೀವರ್ಣ ಪಿ. ಡಿ 100ಮೀ ಹರ್ಡಲ್ ಓಟದಲ್ಲಿ ದ್ವಿತೀಯ ಹಾಗೂ 4×100 ರಿಲೇಯಲ್ಲಿ ತೃತೀಯ ಮತ್ತು 4×100 ಮೀ ರಿಲೇಯಲ್ಲಿ ದ್ವಿತೀಯ ಕಲಾ ವಿಭಾಗದ ಜೀವಿತ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಶ್ರೀಶಾ ತೃತೀಯ ಸ್ಥಾನವನ್ನು, ಬಾಲಕರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ನಿಹಾಲ್ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ರೋಹನ್ ಬೋಪಣ್ಣ ಎ ಎನ್, ನಿಶ್ಚಿತ್ ಮತ್ತು ವಿನ್ಯಾಸ್ ಬಿ. ಪಿ 4× 400ಮೀ ರಿಲೇಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here