ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ಕ್ಲಾಸ್ ತರಬೇತಿ ಶುಭಾರಂಭ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕು, ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ.ಹೇಮಾವತಿ.ವಿ. ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್ ತರಬೇತಿ ಕಾರ್ಯಕ್ರಮದ ಶುಭಾರಂಭ ನ.4ರಂದು ಶಾಲಾ ಸಭಾಂಗಣದಲ್ಲಿ ಜರಗಿತು.

ತರಬೇತಿ ಕಾರ್ಯಕ್ರಮವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ ಹಾಜಿ ಎಸ್ ಅಬೂಬಕರ್ ಆರ್ಲಪದವು ಉದ್ಘಾಟಿಸಿ ಶುಭ ಹಾರೈಸಿದರು. ಪಾಣಾಜೆ ಒಕ್ಕೂಟದ ಅಧ್ಯಕ್ಷ ಐತ್ತಪ್ಪ ನಾಯ್ಕ ಅಧ್ಯಕ್ಷತೆಯನ್ನು ವಹಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್ ರವರು ಸಂದರ್ಭೋಚಿತವಾಗಿ ಮಾತನಾಡಿದರು.

ಬೆಟ್ಟಂಪಾಡಿ ವಲಯ ಮೇಲ್ವಿಚಾರಕರಾದ ಸೋಹನ್ ಗೌಡ ಮತ್ತು ಸುಬೋಧ ಪ್ರೌಢಶಾಲೆಯ ಮುಖ್ಯಗುರು ನಿರ್ಮಲ ಶುಭ ಹಾರೈಸಿದರು. ಸೇವಾ ಪ್ರತಿನಿಧಿ ಜಯಶ್ರೀ ದೇವಸ್ಯ ಸ್ವಾಗತಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್‌ ಪಿ ವಂದಿಸಿದರು. ಯೋಜನೆಯ ಸಮನ್ವಯಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಜಯಶ್ರೀ ಸಹಕರಿಸಿದರು. ವಿದ್ಯಾರ್ಥಿನಿ ಸಿಂಚನ ಪ್ರಾರ್ಥಿಸಿದರು. ಶಾಲಾ ಶಿಕ್ಷಕರು-ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here