ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ನ ನೇತೃತ್ವದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕು ಸಮಿತಿ 2024-25ನೇ ಸಾಲಿನಲ್ಲಿ ಜನಜಾಗೃತಿ ಕಾರ್ಯಕ್ರಮ ಅನುಷ್ಠಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕೆ.ಸವಣೂರು ಅವರ ನೇತೃತ್ವದಲ್ಲಿ ತಾಲೂಕಿನ ವಿವಿಧ ವಲಯಗಳಲ್ಲಿ ನಿರಂತರವಾಗಿ ಜನಜಾಗೃತಿ ಕಾರ್ಯಕ್ರಮಗಳು, ಸ್ವಾಸ್ಥ್ಯ ಸಂಕಲ್ಪ, ಮದ್ಯವರ್ಜನ ಶಿಬಿರ,ನವಜೀವನ ಸಮಾವೇಶ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗಿತ್ತು.
ಉತ್ತಮ ಕಾರ್ಯಕ್ರಮ ನಡೆಸಿದ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡ ಕಡಬ ತಾಲೂಕು ಜನಜಾಗೃತಿ ವೇದಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ನ ಕೇಂದ್ರಕಚೇರಿ ಬೆಳ್ತಂಗಡಿ ಇದರ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್. ಅವರು ಅಭಿನಂದಿಸಿದ್ದಾರೆ.
ಜನಜಾಗೃತಿ ಕಾರ್ಯಕ್ರಮದ ಅನುಷ್ಠಾನದಲ್ಲಿ ಕಡಬ ತಾಲ್ಲೂಕು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿ  ಅಲಂಕರಿಸಲು ಕಾರಣಿಕರ್ತರಾದ ಕಡಬ ತಾಲೂಕಿನ  ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಸವಣೂರು ಮತ್ತು ತಾಲೂಕಿನ ಎಲ್ಲಾ ಪದಾಧಿಕಾರಿಗಳು ಹಾಗೂ ಕಡಬ ತಾಲೂಕಿನ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ, ಪೂಜ್ಯ ಖಾವಂದರಿಗೆ ಉತ್ತಮ ಮಾರ್ಗದರ್ಶನ ಮಾಡಿದ ದ. ಕ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರಿಗೆ ಉಡುಪಿ ಪ್ರಾದೇಶಿಕ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಅವರಿಗೆ ಅತ್ಯುತ್ತಮ ವಾಗಿ ಪ್ರೇರಣೆ ಕೊಟ್ಟು ಮುನ್ನಡೆಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ  ವಿವೇಕ್ ವಿನ್ಸೆಂಟ್ ಪಾಯಸ್ ಅವರಿಗೆ ಕೃತಜ್ಞತೆಗಳು.
-ಪ್ರಕಾಶ್ ,ಯೋಜನಾಧಿಕಾರಿ ಶ್ರೀ ಕ್ಷೇ.ಧ.ಗ್ರಾ.ಯೋ.ಕಡಬ ತಾಲೂಕು
ಎಲ್ಲರ ಸಹಕಾರದಿಂದ ಉತ್ತಮ ಕಾರ್ಯಕ್ರಮ ಅನುಷ್ಠಾನ
ಕ್ಷೇತ್ರ ಧ.ಗ್ರಾ.ಯೋ.ಯ ಜನಜಾಗೃತಿ ಕಾರ್ಯಕ್ರಮ ಅನುಷ್ಠಾನದಲ್ಲಿ 2024-25ನೇ ಸಾಲಿನಲ್ಲಿ ಕಡಬ ತಾಲೂಕು ಜನಜಾಗೃತಿ ವೇದಿಕೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯುವಲ್ಲಿ ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ.ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್, ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಎ.,ಶ್ರೀ ಕ್ಷೇ.ಗ್ರಾ.ಯೋ.ಯ ನಿವೃತ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡ, ಪ್ರಸ್ತುತ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ, ಈ ಹಿಂದಿನ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ,ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷರಾದ ನಟರಾಜ್ ಬಾದಾಮಿ , ಹಿಂದಿನ ತಾಲೂಕು ಯೋಜನಾಧಿಕಾರಿಗಳಾಗಿದ್ದ ಮೇದಪ್ಪ ನಾವೂರು,ಪ್ರಸ್ತುತ ಯೋಜನಾಧಿಕಾರಿ ಪ್ರಕಾಶ್ ಅವರ  ಮಾರ್ಗದರ್ಶನದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಯೋಜನೆಯ ಮುಖ್ಯ ಕಾರ್ಯನಿರ್ವಾಹಕರಾದ ಅನಿಲ್ ಕುಮಾರ್ ಅವರ ಪ್ರೋತ್ಸಾಹದಿಂದ  ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ವಲಯ ಮೇಲ್ವೀಚಾರಕರು,ಸೇವಾ ಪ್ರತಿನಿಧಿಗಳು,ನವಜೀವನ ಸಮಿತಿ ಸದಸ್ಯರು ,ದಾನಿಗಳ ಹಾಗೂ ಕಡಬ ತಾಲೂಕಿನ ಎಲ್ಲಾ ಪದಾಧಿಕಾರಿಗಳ ಸಹಕಾರದಿಂದ ಈ ಸಾಧನೆ ಮಾಡುವಂತಾಗಿದೆ.
-ಮಹೇಶ್ ಕೆ.ಸವಣೂರು
ಅಧ್ಯಕ್ಷರು ,ಜನಜಾಗೃತಿ ವೇದಿಕೆ ಕಡಬ ತಾಲೂಕು