ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಸುಮಾರು 18 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ವಿಷ್ಣುಮೂರ್ತಿ ಅವರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಶುಭವಿದಾಯ ಕೋರಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ,ಸಂಚಾಲಕ ಮಹಾದೇವ ಶಾಸ್ತ್ರಿ ಮಣಿಲ ಹಾಗೂ ಸಹದ್ಯೋಗಿ ಬಂಧುಮಿತ್ರರು ಅವರ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.
ಕಾರ‍್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ಈಶ್ವರ ಚಂದ್ರ, ಸದಸ್ಯರಾದ ರವಿಮುಂಗ್ಲಿ ಮನೆ ಉಪಸ್ಥಿತರಿದ್ದರು. ಸಿವಿಲ್ ವಿಭಾಗ ಮುಖ್ಯಸ್ಥ ರವಿರಾಮ ಯಸ್. ಸ್ವಾಗತಿಸಿದರು. ಹಿರಿಯ ಉಪನ್ಯಾಸಕಿ ಜಯಲಕ್ಷ್ಮಿ ಪ್ರಾರ್ಥಿಸಿದರು. ಪ್ರಾಂಶುಪಾಲ ಮುರಳೀಧರ್.ಎಸ್. ವಂದಿಸಿದರು. ಉಷಾಕಿರಣ್ ಕಾರ್ಯಕ್ರಮ ನಿರೂಪಿಸಿದರು.
