ಪಡುಬೆಟ್ಟು ಸೌಹಾರ್ದ ಫ್ರೆಂಡ್ಸ್ ಕ್ಲಬ್ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

0

ನೆಲ್ಯಾಡಿ: ಸೌಹಾರ್ದ ಫ್ರೆಂಡ್ಸ್ ಕ್ಲಬ್ ಪಡುಬೆಟ್ಟು, ನೆಲ್ಯಾಡಿ ಇದರ ಉದ್ಘಾಟನೆ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರೋಟರಿ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸೌಹಾರ್ದ ಫ್ರೆಂಡ್ಸ್ ಕ್ಲಬ್ ಪಡುಬೆಟ್ಟು ಇದರ ಅಧ್ಯಕ್ಷ ಹನೀಫ್ ಝಮ್ ಝಮ್ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ಮಹಾಲಿಂಗ ಕೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಲಾಂ ಬಿಲಾಲ್, ರೋಟರಿ ಕ್ಲಬ್ ಪುತ್ತೂರು ಇದರ ವೈದ್ಯರಾದ ಡಾ. ಸೀತಾರಾಮ ಭಟ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಶೆಟ್ಟಿ ಹೊಸಮನೆ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷ ರಫೀಕ್ ಉಳಿತೊಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿಚಂದ್ರ, ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಕುಶಾಲಪ್ಪ, ಸಾಮಾಜಿಕ ಕಾರ್ಯಕರ್ತ ಹೆರಾಲ್ಡ್ ಡಿಸೋಜ, ಸೀತಾರಾಮ ಕಾನಮನೆ, ಕಬೀರ್ ತಾಜ್ ಉಪಸ್ಥಿತರಿದ್ದರು.


ಕಾರ್ಯದರ್ಶಿ ಸಮೀರುದ್ದೀನ್ ಪಡುಬೆಟ್ಟು, ಸ್ವಾಗತಿಸಿ ಕೋಶಧಿಕಾರಿ ತೌಫಿಕ್ ಪಡುಬೆಟ್ಟು ವಂದಿಸಿದರು. ಸಿನಾನ್ ಪಡುಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here