





ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿಯಿಂದ ನ.19ರಂದು ’ಅಟಲ್ ವಿರಾಸತ್’ ಕಾರ್ಯಕ್ರಮವು ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಇದರ ಪೂರ್ವಭಾವಿ ಸಭೆಯು ನ.4ರಂದು ಶ್ರೀ ಸುಕ್ರುತೀಂದ್ರ ಕಲಾಮಂದಿರದ ಆವರಣದಲ್ಲಿ ನಡೆಯಿತು.



“ಅಟಲ್ ವಿರಾಸತ್”ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ರೂಪುರೇಷೆಯನ್ನು ತಿಳಿಸಿದರು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ್ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ವಿಧಾನ ಪರಿಷತ್ತಿನ ಮಾನ್ಯ ಶಾಸಕ ಹಾಗೂ ಅಟಲ್ ವಿರಾಸತ್ನ ಜಿಲ್ಲಾ ಸಂಚಾಲಕ ಕಿಶೋರ್ ಕುಮಾರ್ ಬೊಟ್ಯಾಡಿ, ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹಾಗೂ ಪುತ್ತೂರಿನ ಪ್ರಭಾರಿ ಸುನಿಲ್ ಆಳ್ವ, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.







            







