ಬಡಗನ್ನೂರು: ಪುತ್ತೂರು ಮಾತೃ ಸಂಸ್ಥೆ: ದ್ವಾರಕಾ ಪ್ರತಿಷ್ಠಾನ (ರಿ) ವತಿಯಿಂದ ನಡೆಸಲ್ಪಡುವ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡೋತ್ಸವವು ನ. 6ರಂದು 9.30 ಶಾಲಾ ಆವರಣದಲ್ಲಿ ನಡೆಯಲಿದೆ.
ವಾರ್ಷಿಕ ಕ್ರೀಡೋತ್ಸವನ್ನು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಉದ್ಘಾಟನೆ ನೆರವೇರಿಸಿ ಬಳಿಕ ಅಧ್ಯಕ್ಷತೆ ವಹಿಸಲಿದ್ದಾರೆ.ಅಭ್ಯಾಗತರಾಗಿ ಪಟ್ಟೆ ಪ್ರತಿಭಾ ಪ್ರೌಢ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ,ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ ,ಪಟ್ಟೆ ಶ್ರೀಕೃಷ್ಣ ಆಂಗ್ಲಮಾಧ್ಯಮ ಶಾಲಾ, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಸತೀಶ್ ಕೊಪ್ಪಳ, ಗೌರವ ಉಪಸ್ಥಿತರಾಗಿ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸದಸ್ಯ ಗಣರಾಜ ಕುಂಬ್ಳೆ,ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ, ಸಂಚಾಲಕ ವಿಶ್ವೇಶ್ ಹಿರಣ್ಯ ಪ್ರತಿಭಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನಾ ಬಿ., ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್, ಭಾಗವಹಿಸಲಿದ್ದಾರೆ.