ಪುತ್ತೂರು: ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲು ಶ್ರೀ ರಕ್ತೇಶ್ವರಿ ಶ್ರೀ ಪಂಜುರ್ಲಿ ಪರಿವಾರ ದೈವಗಳ ಸಾನಿಧ್ಯದಲ್ಲಿ ನ.6 ಮತ್ತು 7ರಂದು ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೈವಗಳ ಶಿಲಾ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಸಾನಿಧ್ಯದಲ್ಲಿ ಊರ ಸಮಸ್ತರಿಂದ ಶ್ರಮದಾನ ನಡೆಯಿತು. ಗ್ರಾಮದ ಹಲವು ಮಂದಿ ಭಕ್ತರು ಸಾನಿಧ್ಯದ ಸುತ್ತಮುತ್ತ ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು.
