ಪುತ್ತೂರು: ಡಾ.ಕಲ್ಲಡ್ಕ ಪ್ರಭಾಕರ ಭಟ್ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ನವೆಂಬರ್ 5ರಂದು ಸಂಜೆ ಹಾಜರಾಗಿದ್ದಾರೆ.
ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕೋಮು ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ಈಶ್ವರಿ ಪದ್ಮುಂಜ ದೂರು ನೀಡಿದ್ದರು. ಆ ದೂರಿನ ಮೇರೆಗೆ ಧ್ವನಿ ಪರೀಕ್ಷೆಗೆ ಪುತ್ತೂರು ಗ್ರಾಮಾಂತರ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
