





ಬಡಗನ್ನೂರು: ಬಡಗನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ನಿವೃತ್ತ ಶಿಕ್ಷಕರಾದ ಹರಿಣಾಕ್ಷಿ ಎ ರವರು ಕನ್ನಡದ ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿನದ ಮಹತ್ವವನ್ನು ತಿಳಿಸಿದರು. ಎಸ್ ಡಿಎಂಸಿ ಅಧ್ಯಕ್ಷ ಗಿರೀಶ್ ಗೌಡ ಕನ್ನಯರವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡಿ ಶುಭಹಾರೈಸಿದರು.



ವೇದಿಕೆಯಲ್ಲಿ ಎಸ್ ಡಿಎಂಸಿ ಉಪಾಧ್ಯಕ್ಷೆ ಸುಲೋಚನ ಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು, ಅಕ್ಷರದಾಸೋಹ ಸಿಬ್ಬಂದಿಗಳು, ಶಿಕ್ಷಕ ವೖಂದದವರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.





ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಕನ್ನಡ ಗೀತಗಾಯನ, ಹಾಗೂ ನಾಡು ನುಡಿಯ ಬಗ್ಗೆ ಭಾಷಣ ಕಾರ್ಯಕ್ರಮ ನಡೆಯಿತು. ಶಾಲಾ ಪ್ರಭಾರ ಮುಖ್ಯಗುರುಗಳಾದ ವಿಜಯಲಕ್ಷ್ಮಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಾಂಸ್ಕೃತಿಕ ಮಂತ್ರಿಗಳಾದ ಗಾಯತ್ರಿ ಹಾಗೂ ದೇವಿಕಾ ಪಿ ಎಸ್ ಕಾರ್ಯಕ್ರಮ ನಿರೂಪಿಸಿದರು. ಮಧುಶ್ರೀ ಎನ್ ವಂದಿಸಿದರು.







