





ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರ್ಕಾರಿ ಪ್ರೌಢಶಾಲೆ ನಾವೂರು ಇವರು ಬಂಟ್ವಾಳ ಎಸ್.ವಿ.ಎಸ್ ಶಾಲಾ ಕ್ರೀಡಾಂಗಣದಲ್ಲಿ ನಡೆಸಿದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಾನದ ವಿಭಾಗದಲ್ಲಿ ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರವು ಹಲವು ಪ್ರಶಸ್ತಿ ಹಾಗೂ ಶಾಲಾ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.


10ನೇ ತರಗತಿಯ ಲಿಖಿತ್ ಎನ್. 800 ಮೀ ಓಟ,1500ಮೀ ಓಟ ಹಾಗೂ 3000ಮೀ ಓಟ ಸ್ಪರ್ಧೆಯಲ್ಲಿ ಚಿನ್ನದ ಪದಕ, ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. 10ನೇ ತರಗತಿಯ ಹರ್ಪಿತ ಉದ್ದ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ. 10ನೇ ತರಗತಿಯ ಸಿಂಚನಾ 3000ಮೀ ಓಟ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. 4×100 ಮೀ ರಿಲೆಯಲ್ಲಿ ಲಿಖಿತ್.ಎನ್, ರಕ್ಷಣ್.ಎಚ್, ಚಿದಾನಂದ ಪೂಜಾರಿ, ನಿಶಾಂತ್ ಕುಮಾರ್ ಇವರು ಚಿನ್ನದ ಪದಕವನ್ನು ಪಡೆದಿರುತ್ತಾರೆ.





ಪ್ರಾಥಮಿಕ ಶಾಲಾ 7ನೇ ತರಗತಿ ತೃಷಾ ಎಂ.ಸಿ. 200ಮೀ ಓಟ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಒಟ್ಟು 6 ಚಿನ್ನ ಹಾಗೂ 1 ಬೆಳ್ಳಿ ಪದಕ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಇವರು ಮುಂದೆ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಶ್ರೀದೇವಿ ವಿದ್ಯಾಕೇಂದ್ರ, ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.









