ಪುತ್ತೂರು: ಮಕ್ಕಳ ಕಲಿಕೆ ತರಗತಿ ಕೋಣೆಯಲ್ಲಿ ಮಾತ್ರ ನಡೆಯದೆ ಹೊರ ಜಗತ್ತಿನಲ್ಲಿ ಹೆಚ್ಚು ಕಲಿಯುವಂತಾಗಬೇಕು.ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳ ಸರ್ವತೋಮುಖ ಕಲಿಕೆಗೆ ಸಹಕಾರಿ ಎಂದು ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ಹೇಳಿದರು.
ಅವರು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರ ಕಾಣಿಯೂರು ಹಾಗೂ ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾಣಿಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು ಇದರ ಆಡಳಿತ ಮಂಡಳಿಯ ಕಾರ್ಯದರ್ಶಿ ಬಶೀರ್ ಹಾಜಿ ವಹಿಸಿದ್ದರು.ವೇದಿಕೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ , ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ಸದಸ್ಯರಾದ ವಿಠಲ ಗೌಡ ಅಗಳಿ, ಕುಸುಮಾವತಿ ಅಂಕಜಾಲು, ಮೋಹನ ಅಗಳಿ , ಸವಣೂರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಜಾಕ್ ಕೆನರಾ, ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ಸಿ, ಸವಣೂರು ಕ್ಲಸ್ಟರ್ ಸಿ ಆರ್ ಪಿ ಜಯಂತ್ ವೈ, ಈಡನ್ ಗ್ಲೋಬಲ್ ಸ್ಕೂಲಿನ ಚೇರ್ಮನ್ ಅಶ್ರಫ್ ಶಾ ಮಾಂತೂರು, ನೋಡಲ್ ಅಧಿಕಾರಿ ಶ್ರುತಿ ಶೆಟ್ಟಿ ಉಪಸ್ಥಿತರಿದ್ದರು.ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದಾ ಎ ಪ್ರಾಸ್ತಾವಿಕ ಮಾತನಾಡಿದರು.ಪ್ರಾಂಶುಪಾಲ ರಂಝೀ ಮುಹಮ್ಮದ್ ಸ್ವಾಗತಿಸಿ ಇನ್ತಿಯಾಜ್ ವಂದಿಸಿದರು. ಶಿಕ್ಷಕರಾದ ಝುನೈಫ್ ಮತ್ತು ಹರ್ಷಿತಾ ನಿರೂಪಿಸಿದರು