ನ.8: ಪುತ್ತೂರಿನಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಮೂತ್ರಾಶಯದ ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆಗಳ ಉಚಿತ ತಪಾಸಣಾ, ಮಾಹಿತಿ ಶಿಬಿರ

0

ಪುತ್ತೂರು: ದೇರಳಕಟ್ಟೆಯಲ್ಲಿರುವ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಪುತ್ತೂರು ಕಲ್ಲಾರೆ ಬಳಿಯೂರು ದರ್ಬಾರ್ ಕಾಂಪ್ಲೆಕ್ಸ್‌ನಲ್ಲಿರುವ ಪರ್ಲ್ ಸಿಟಿ ಲ್ಯಾಬೋರೇಟರಿಯಲ್ಲಿ ಮೂತ್ರಾಶಯದ ಕ್ಯಾನ್ಸರ್ ಮತ್ತು ಮೂತ್ರಪಿಂಡದ ಕಾಯಿಲೆಗಳ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರ ನ.8 ರಂದು ನಡೆಯಲಿದೆ ಎಂದು ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಶೇಟ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಶಿಬಿರವು ಬೆಳಗ್ಗೆ ಗಂಟೆ 10ರಿಂದ ಮಧ್ಯಾಹ್ನ ತನಕ ನಡೆಯಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶಿಫಾರಸು ಮಾಡಿ ಅತ್ಯಂತ ರಿಯಾಯಿತಿ ಅಥವಾ ಸರಕಾರಿ ಯೋಜನೆಗಳಡಿಯಲ್ಲಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯನ್ನು ಮುಕ್ತವಾಗಿ ನಡೆಸಲಾಗುವುದು ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೀನಿಯರ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ವಿಜಯಾನಂದ ಶೆಟ್ಟಿ, ಯೆನ್ ಮಿತ್ರ ಹಾಗೂ ಆಸ್ಪತ್ರೆಯ ಹಿತೈಷಿ ಮನೋಹರ್ ರೈ, ಶಿಬಿರದ ಸಂಯೋಜಕ ಉಮರ್ ಶಾಫಿ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here