ಪುತ್ತೂರು: ರೋಟರಿ ಕ್ಲಬ್ ಉಪ್ಪಿನಂಗಡಿ ವತಿಯಿಂದ ದೀಪಾವಳಿ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಜರಗಿತು.

ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಗವರ್ನರ್ ನಾಮಿನಿ ಸತೀಶ್ ಬೋಳಾರ್ ರವರು ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ.ರಾಜಾರಾಮ್ ಕೆ.ಬಿ, ವಲಯ ಸೇನಾನಿ ಹರೀಶ್ ವಿಟ್ಲರವರು ಭಾಗವಹಿಸಿ ಶುಭ ಹಾರೈಸಿದರು. ಕ್ಲಬ್ ಅಧ್ಯಕ್ಷರಾದ ಜೋನ್ ಕೆನ್ಯೂಟ್ ಮಸ್ಕರೇನ್ಹಸ್ ರವರು ಮಾತನಾಡಿ, ಎಲ್ಲಾ ಹಬ್ಬಗಳನ್ನು ಆಚರಿಸುವ ಒಂದು ಸಂಸ್ಥೆ ಇದ್ದರೆ ಅದು ರೋಟರಿ ಸಂಸ್ಥೆ. ಹಲವು ವರ್ಷಗಳಿಂದ ಎಲ್ಲಾ ಹಬ್ಬಗಳನ್ನು ಆಚರಿಸುತ್ತಾ ಬಂದಿರುತ್ತೇವೆ ಸದಸ್ಯರ ಸಂಪೂರ್ಣ ಸಹಕಾರ ದೊರೆಯುತ್ತದೆ ಮುಂದೆಯೂ ಕೂಡ ಈ ಸಹಕಾರವನ್ನು ನೀಡಬೇಕಾಗಿ ವಿನಂತಿಸಿದರು.
ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ನವೀನ್ ಬ್ರ್ಯಾಗ್ಸ್, ನಿಯೋಜಿತ ಅಧ್ಯಕ್ಷ ಕೇಶವ್ ಪಿ, ಕಾರ್ಯದರ್ಶಿ ಶ್ರೀಕಾಂತ್ ಪಟೇಲ್ ಉಪಸ್ಥಿತರಿದ್ದರು. ಸದಸ್ಯೆ ಆಶಾಲತಾ ಕಾರ್ಯಕ್ರಮ ನಿರೂಪಿಸಿದರು.
ಸನ್ಮಾನ…
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜೋತ್ಸವ ತಾಲೂಕು ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಉದಯ್ ಕುಮಾರ್ ಯು.ಎಲ್ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಶಬ್ಬೀರ್ ಕೆಂಪಿರವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.