





ಪುತ್ತೂರು: ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಆಚರಿಸಲಾಯಿತು.



ಧ್ವಜಾರೋಹಣವನ್ನು ಶಾಲಾ ಪ್ರಾಂಶುಪಾಲರಾದ ಸಿಂಧು ವಿ.ಜಿ ನೇರವೇರಿಸಿ, ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು. ಬಳಿಕ ನಡೆದ ಸಭಾಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಹಾಗೂ ಪರೀಕ್ಷಾಂಗ ಕುಲಸಚಿವರಾದ ಶ್ರೀಧರ್ ಹೆಚ್. ಜಿ, ಕನ್ನಡ ಭಾಷೆ ಬೆಳೆದು ಬಂದ ಹಾದಿ, ಕನ್ನಡಕ್ಕೆ ಇರುವ ಇತಿಹಾಸ ಹಾಗೂ ಕನ್ನಡದ ಹಿರಿಮೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.





ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶಂಕರಿ ಶರ್ಮ ಮಕ್ಕಳು ಮಾತೃಭಾಷೆಯಾದ ಕನ್ನಡವನ್ನು ಓದಲು ಬರೆಯಲು ಸರಿಯಾಗಿ ಕಲಿಯಬೇಕು ಮತ್ತು ಎಲ್ಲಾ ಭಾಷೆಗಳಿಗೂ ಸಮಾನ ಗೌರವವನ್ನು ನೀಡಬೇಕೆಂದು ಹೇಳಿ ಶುಭ ಹಾರೈಸಿದರು.
ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು. 8ನೇ ತರಗತಿಯ ರಿಷಿಕಾ ಸ್ವಾಗತಿಸಿ, ಧೃತಿ ಎನ್ ವಂದಿಸಿ, ಆರಾಧನಾ ನಿರೂಪಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.










