ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನ.6ರ ರಾತ್ರಿ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್ (14 ವ.) ಮೃತಪಟ್ಟವರು. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.
