ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನವೆಂಬರ್ 25 ಹಾಗೂ 26 ರಂದು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಪಂಚಮಿ ಉತ್ಸವ ಹಾಗೂ ಷಷ್ಠಿ ಮಹೋತ್ಸವವು ವಿಜ್ರಂಭಣೆಯಿಂದ ಜರಗಲಿದ್ದು, ಆ ಪ್ರಯುಕ್ತ ನ.9 ರಂದು ದೇವಸ್ಥಾನದ ಒಳಗೆ, ಹೊರಗೆ ಹಾಗೂ ದೈವ ಸಾನಿಧ್ಯಗಳ ಸ್ವಚ್ಛತೆ ಕಾರ್ಯ ನಡೆಯಲಿದೆ.
ಆದುದರಿಂದ ಈ ಸ್ವಚ್ಚತಾ ಕಾರ್ಯಕ್ಕೆ ಎಲ್ಲ ಸಹಕರಿಸುವ ಸಂಘ ಸಂಸ್ಥೆಗಳ ಸದಸ್ಯರುಗಳು, ಸ್ವಯಂಸೇವಕರು ಹಾಗೂ ಊರಿನ ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಜೊತೆಗೆ ಜಾತ್ರಾ ದಿನಗಳಲ್ಲೂ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವವರು ನ.9 ರಂದು ಹೆಸರು ನೋಂದಾಯಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 7795711499, 9980223709 ಸಂಪರ್ಕಿಸಬೇಕಾಗಿ ವಿನಂತಿಸಲಾಗಿದೆ ಎಂದು ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.