ಪುತ್ತೂರು: ಡಯಟ್ ಹಿರಿಯ ಉಪನ್ಯಾಸಕರಿಂದ ಪದವಿ ಪೂರ್ವ ಕಾಲೇಜುಗಳ ಮೌಲ್ಯಮಾಪನ ಮಾಡುವ ಸುತ್ತೋಲೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರ ಜಿಲ್ಲಾ ಸಂಘದಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇ ಗೌಡರಿಗರ ಮನವಿ ಸಲ್ಲಿಸಿದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಮಮತಾ, ವಿಠ್ಠಲ್, ಸಂಘದ ಪದಾಧಿಕಾರಿಗಳು, ಉಪನ್ಯಾಸಕರ ಸಂಘದ ಅಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಕಾರ್ಯಧ್ಯಕ್ಷ ಚಂದ್ರನಾಥ ಎಂ, ಪ್ರಧಾನ ಕಾರ್ಯದರ್ಶಿ ಶೀನಪ್ಪ, ಉಪಾಧ್ಯಕ್ಷ ಉಮೇಶ್ ಹಾಗೂ ವಿಷಯವಾರು ಸಂಘದ ಅಧ್ಯಕ್ಷರುಗಳು ಉಪನ್ಯಾಸಕರು ಉಪಸ್ಥಿತರಿದ್ದರು
