ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಪೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ತಿಳುವಳಿಕೆ ಅನಿವಾರ್ಯತೆಯ ಬಗ್ಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ಅವರು, ಪೋಕ್ಸೊ ಕಾಯ್ದೆಯು ಯಾವುದೇ ಲಿಂಗ ಭೇದವಿಲ್ಲದೆ ಎಲ್ಲಾ ಗಂಡು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಇರುವ ಕಾಯ್ದೆ ಎಂದು ತಿಳಿಸಿದರು.
ಬೆಳ್ಳಾರೆ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಡಿ.ಎನ್. ಈರಯ್ಯ ಅವರು ವಿದ್ಯಾರ್ಥಿಗಳಿಗೆ ಫೊಕ್ಸೊ ಕಾಯ್ದೆಯ ಬಗ್ಗೆ ತಿಳಿಸಿ ಪ್ರಸ್ತುತ ನಡೆಯುತ್ತಿರುವ ಹಗರಣಗಳ ಬಗ್ಗೆ ಜಾಗರೂಕರಾಗಿರಿ, ಮಕ್ಕಳಿಗೆ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಭಯವಿಲ್ಲದೆ ಸಹಾಯವಾಣಿಗೆ ಕರೆ ಮಾಡುವಂತೆ ಹೇಳಿದರು.
ವೇದಿಕೆಯಲ್ಲಿ ಸಂಸ್ಥೆಯ ಟ್ರಸ್ಟಿಗಳಾದ ರಶ್ಮಿ ಅಶ್ವಿನ್ ಎಲ್ ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ,ಸವಣೂರು ಸಿ.ಎ.ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ ಉಪಸ್ಥಿತರಿದ್ದರು.
ಶ್ರದ್ಧಾ ಮತ್ತು ಬಳಗ ಪ್ರಾರ್ಥಿಸಿ, ಸಂವಿಧಾನ ಪೀಠಿಕೆ 10ನೇ ತರಗತಿಯ ಆಶೀರ್ ಇಬ್ರಾಹಿಂ ವಾಚಿಸಿ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಖದೀಜತುಲ್ ಅಶ್ಫಿಯ ಸ್ವಾಗತಿಸಿ, ೯ನೇ ತರಗತಿಯ ಶಂತನುಕೃಷ್ಣ ಕೆ ಎ ಅತಿಥಿಗಳನ್ನು ಪರಿಚಯಿಸಿದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ದೇಚಮ್ಮ ಬಿಎಂ ವಂದಿಸಿ, 10ನೇ ತರಗತಿ ಸಜ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಹರ್ಷಿಣಿ ಮತ್ತು ಆಂಗ್ಲ ಉಪನ್ಯಾಸಕಿಯಾದ ತೇಜಸ್ವಿ ಕಾರ್ಯಕ್ರಮಕ್ಕೆ ಸಹಕರಿಸಿದರು.
