ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ, ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಹರಕೆಯ ನೇಮೋತ್ಸವ   

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ನ.5 ರಂದು ಹರಕೆಯ ನೇಮೋತ್ಸವ ನಡೆಯಿತು. 

ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ  ಕುಂಡ ಮೊಗೇರ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ತ ಗಣೇಶ್ ಪೂಜಾರಿ ಕೆಮ್ಮಿಂಜೆ, ಶ್ರೀ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ ಮಣ್ಣಾಪು ಸಹಿತ ಹಲವರು ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರ ಮಣ್ಣಾಪು ಆಡಳಿತ ಸಮಿತಿ(ಮೊ:7760580714, 9901636848, 7349237945, 9591306593)ಯನ್ನು ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ನ.8 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಬೇಕಾಗಿದ್ದ ಹರಕೆಯ ನೇಮೋತ್ಸವವು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ. ಭಕ್ತರು ಗಮನಿಸಬೇಕಾಗಿ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here