





ಪುತ್ತೂರು : ಪ್ರತಿಭೆ ಯಾರದೇ ಸೊತ್ತಲ್ಲ.ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಯನ್ನು ಎಲ್ಲರೂ ಪ್ರೋತ್ಸಾಹಿಸಬೇಕು.ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಪ್ರತಿಭಾ ಕಾರಂಜಿ ಸಹಕಾರಿ ಎಂದು ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ ಕೆ ಹೇಳಿದರು.



ಅವರು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಸಮೂಹ ಸಂಪನ್ಮೂಲ ಕೇಂದ್ರ ಸವಣೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸವಣೂರು ಮೊಗರು ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸವಣೂರು ಮೊಗರು ಇಲ್ಲಿ ನಡೆದ ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.





ಅಧ್ಯಕ್ಷತೆಯನ್ನು ಸವಣೂರು ಮೊಗರು ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಎಂ ಎ ವಹಿಸಿದ್ದರು. ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಝಾಕ್ ಕೆನರಾ, ಬಾಬು ಜರಿನಾರು ಚೆನ್ನು ಕೆ, ಸಬೀನಾ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದಾ ಎ ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಭಟ್ ಕುಕ್ಕುಜೆ, ಶಿವರಾಮ ಗೌಡ ಮೆದು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ನಿಂಗರಾಜು ಕೆ ಉಪಸ್ಥಿತರಿದ್ದರು ಸವಣೂರು ಕ್ಲಸ್ಟರ್ ಸಿ ಆರ್ ಪಿ ಜಯಂತ್ ವೈ ಪ್ರಾಸ್ತಾವಿಕ ಮಾತನಾಡಿದರು.
ಸನ್ಮಾನ: ಇದೇ ಸಂದರ್ಭದಲ್ಲಿ ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬಿ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಜಗನ್ನಾಥ ಎಸ್ ಇವರನ್ನು ಸನ್ಮಾನಿಸಲಾಯಿತು
ಸಮಾರೋಪ: ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು ಸದಸ್ಯರಾದ ಗಿರಿ ಶಂಕರ ಸುಲಾಯ, ಚಂದ್ರಾವತಿ ಸುಣ್ಣಾಜೆ, ಗ್ರಾಮ ಪಂಚಾಯತ್ ಲೆಕ್ಕ ಸಹಾಯಕಿ ಜಯಂತಿ, ಸರ್ಕಾರಿ ನೌಕರರ ಸಂಘದ ಕಡಬ ತಾಲೂಕು ಪ್ರತಿನಿಧಿ ಶ್ರೀಲತಾ ಕೆ ಉಪಸ್ಥಿತರಿದ್ದರು.ಶಾಲಾ ಮುಖ್ಯ ಗುರು ಜ್ಯುಸ್ತಿನಾ ಡಿಸೋಜಾ ಸ್ವಾಗತಿಸಿ ಸಹಶಿಕ್ಷಕಿ ಜಾನಕಿ ವಂದಿಸಿದರು ಸಹಶಿಕ್ಷಕಿ ಸವಿತಾ ಕುಮಾರಿ ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು.ಶಿಕ್ಷಕಿಯರಾದ ಗುಲ್ಶನ್ ಕೌಸರ್ ಮತ್ತು ದಯಾಮಣಿ ಕೆ ನಿರೂಪಿಸಿದರು.

ಸಮಗ್ರ ಪ್ರಶಸ್ತಿ: ಕಿರಿಯ ಪ್ರಾಥಮಿಕ ವಿಭಾಗದ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಣ್ಚಪ್ಪಾಡಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ತೃತೀಯ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆರೇಲ್ತಡಿ ಹಿರಿಯ ವಿಭಾಗದ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಣ್ಚಪ್ಪಾಡಿ ಮತ್ತು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ತೃತೀಯ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸವಣೂರು ಮೊಗರು ಶಾಲೆಗಳ ವಿದ್ಯಾರ್ಥಿಗಳು ಪಡೆದುಕೊಂಡರು.










