





ರಾಮಕುಂಜ: ಡಿಪಾರ್ಟ್ ಮೆಂಟ್ ಆಫ್ ಯೂತ್ ಎಂಪೈರ್ಮೆಂಟ್ ಆ್ಯಂಡ್ ಸ್ಪೋರ್ಟ್ಸ್ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನವಂಬರ್ 3ರಿಂದ 7ರ ತನಕ ನಡೆದ 4ನೇ ಮಿನಿ ಒಲಂಪಿಕ್ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಕ್ಷಿಣ ಕನ್ನಡ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.



ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ತಂಡವನ್ನು ಪ್ರತಿನಿಧಿಸಿದ ಸಂಸ್ಥೆಯ ವಿದ್ಯಾರ್ಥಿನಿ ಭುವಿ (ಕುಂಟ್ಯಾನ ಮನೆ ಮೋನಪ್ಪ ಗೌಡ ಹಾಗೂ ಮೋಹಿನಿ ದಂಪತಿ ಅವರ ಪುತ್ರಿ) ಇವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.





ವಿದ್ಯಾರ್ಥಿನಿಗೆ ಮಾಧವ ಬಿ.ಕೆ ಜಸ್ವಂತ್ ಹಾಗೂ ಮಂಜುನಾಥ್ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ಇವರು ತರಬೇತಿ ನೀಡಿದ್ದರು ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯ ಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು ,ಶಾಲಾ ಪೋಷಕರು, ಹಿರಿಯ ವಿದ್ಯಾರ್ಥಿಗಳು ವಿವಿಧ ರೀತಿಯಲ್ಲಿ ಸಹಕರಿಸಿದ್ದರು









