ಆಲಂಕಾರು: ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ, ಗ್ರಾಮ ಪಂಚಾಯತ್ ಆಲಂಕಾರು ಇದರ ಆಶ್ರಯದಲ್ಲಿ ಅಶ್ವಿನ್ ಕಣ್ಣಿನ ಚಿಕಿತ್ಸಾಲಯ ಮತ್ತು ಒಪ್ಟಿಕಲ್ಸ್ ಯೋಗ ಕ್ಷೇಮ ಸಂಕೀರ್ಣ ಕಡಬ ಮತ್ತು ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು ಇವರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣೆ ನ.9ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರ ತನಕ ಆಲಂಕಾರು ದುರ್ಗಾಂಬಾ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ ಎಂದು 60ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ, ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಂಗಾಧರ ಶೆಟ್ಟಿ ಹೊಸಮನೆ ಹಾಗೂ ಆಲಂಕಾರು ಗ್ರಾ.ಪಂ., ಆಲಂಕಾರು ಲಯನ್ಸ್ ಕ್ಲಬ್ ಪ್ರಕಟಣೆ ತಿಳಿಸಿದೆ.
