





ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನ.9ರಿಂದ ನ.11 ರ ತನಕ ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುಣೆ ಘಟಕದ ವಾರ್ಷಿಕೋತ್ಸವ -ಗುರುವಂದನಾ ಕಾರ್ಯಕ್ರಮ ಮತ್ತು ಬಳಗವು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನುಗ್ರಹಿಸಲಿರುವ ಹಿನ್ನೆಲೆಯಲ್ಲಿ ಸದ್ರಿ ದಿವಸಗಳಲ್ಲಿ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.










