ಪುತ್ತೂರು: ನೆಹರೂನಗರ ಕಾಲೇಜ್ ಗೇಟ್ ಬಿಲ್ಡಿಂಗ್ ನಲ್ಲಿ ನ.15ರಂದು ನೂತನವಾಗಿ ಉದ್ಘಾಟನೆಗೊಳ್ಳಲಿರುವ ಕರ್ನಾಟಕದ ಅತೀದೊಡ್ಡ ಪುಸ್ತಕ ಮಾರಾಟ ಮಳಿಗೆ ಎಸ್.ಎಲ್.ವಿ. ಬುಕ್ ಹೌಸ್ ನ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈರವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿ. ನ ಆಡಳಿತ ನಿರ್ದೇಶಕರಾದ ದಿವಾಕರ ದಾಸ್ ನೇರ್ಲಾಜೆ, ಪ್ರಮುಖರಾದ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮೊದಲಾದವರು ಉಪಸ್ಥಿತರಿದ್ದರು.
