





ಸುಳ್ಯ: ಸುಳ್ಯ ಅನ್ಸಾರಿಯಾ ಗಲ್ಫ್ ಆಡಿಟೋರಿಯಂನಲ್ಲಿ ಸುಳ್ಯ ತಾಲೂಕಿನ ಎಲ್ಲಾ ಮಸೀದಿ, ಮದ್ರಸಗಳ ಆಡಳಿತ ಮಂಡಳಿ ಅಧ್ಯಕ್ಷ, ಕಾರ್ಯದರ್ಶಿ, ಕೋಶಾಧಿಕಾರಿಗಳ ಸಭೆಯು ನ.11ರ ಮಂಗಳವಾರ ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಲಾಗಿದೆ.
ಜಿಲ್ಲಾ ವಕ್ಫ್ ಅಧಿಕಾರಿಗಳ ನಿರ್ದೇಶನದಂತೆ ಆಯೋಜಿಸಲಾದ ಈ ಕಾರ್ಯಗಾರದಲ್ಲಿ ಮಾಹಿತಿ ನೀಡಲು ಜಿಲ್ಲಾ ವಕ್ಫ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ. ವಕ್ಫ್ ಆಸ್ತಿಗಳನ್ನು ಉಮ್ಮೀದ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಬೇಕೆಂಬ ಸರ್ಕಾರದ ಆದೇಶ ಇರುವುದರಿಂದ ಸಂಬಂಧ ಪಟ್ಟ ದಾಖಲೆಗಳನ್ನು ತರಬೇಕಾಗಿ ವಿನಂತಿಸಲಾಗಿದೆ.
ಎಲ್ಲಾ ಮಸೀದಿ, ಮದ್ರಸಗಳ ಪದಾಧಿಕಾರಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದು ಕೊಳ್ಳುವಂತೆ ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಕಲ್ಯಾಣ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ.ಮುಸ್ತಫಾ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸುತ್ತಾರೆ.









