ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ

0

ಶಾಲೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಹಕಾರ ಅಗತ್ಯ-ಬಾಲಕೃಷ್ಣ ಪೋರ್ದಾಲ್

ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ಹಳೆಯ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಹಾಗೂ ಸಂಘಟಿಸುವ ಉದ್ದೇಶದಿಂದ ಸಮಾಗಮವು ‘ಸ್ನೇಹ ಮಿಲನ’ ಕಾರ್ಯಕ್ರಮ ನ.7ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಪೃಥ್ವಿ ಹಾಗೂ ವಿವಿಯನ್ ಲೋಬೊ ಅವರು ಚಿಟ್ಟೆಯ ಪ್ರತೀಕವನ್ನು ಸಾಂಕೇತಿಕವಾಗಿ ಅರಳಿಸುವ ಮೂಲಕ ಮೂಲಕ ಉದ್ಘಾಟನೆಗೊಂಡಿತ್ತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಿಕ್ಷಕ ಬಾಲಕೃಷ್ಣ ರೈ ಪೋರ್ದಾಲ್ ಮಾತನಾಡಿ, “ತಮ್ಮನ್ನು ರೂಪಿಸಿದ ಶಾಲೆಯನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು. ಒಂದು ಶಾಲೆಯ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಹಕಾರವು ಮಹತ್ತರ ಪಾತ್ರವನ್ನು ವಹಿಸುತ್ತದೆ. ಯುವಕರಲ್ಲಿ ಸಂಘಟನಾ ಶಕ್ತಿ ಇದ್ದು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಭಗಿನಿ ಮಾರಿಯೋಲ ಬಿ.ಎಸ್. ಮಾತನಾಡಿ, ಶಾಲಾ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳು ಯಾವೆಲ್ಲ ರೀತಿಯಲ್ಲಿ ಪಾತ್ರ ವಹಿಸಬಹುದೆಂದು ತಿಳಿಸಿ ಎಲ್ಲರೂ ಸಹಕರಿಸುವಂತೆ ತಿಳಿಸಿದರು.


ಭಗಿನಿ ಎಮಿರೀಟಾ ಬಿ.ಎಸ್ ಹಾಗೂ ಶಾಲಾ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ರಘುನಾಥ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರಿಯೋಲ ಬಿ.ಎಸ್‌ರವರ ಮಾರ್ಗದರ್ಶನದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಬಾಲಕೃಷ್ಣ ರೈ ಪೋರ್ದಾಲ್ ರವರು ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನ ಆಟಗಳನ್ನು ಆಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಬಿಎಸ್ ಸ್ವಾಗತಿಸಿದರು. ಶಿಕ್ಷಕಿ ಬೃಂದಾ ಕಾರ್ಯಕ್ರಮ ನಿರೂಪಿಸಿದರು. ಭಗಿನಿ ಗ್ರೇಸ್ ಮೋನಿಕಾ ಬಿ.ಎಸ್ ವಂದಿಸಿದರು.

LEAVE A REPLY

Please enter your comment!
Please enter your name here