ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ನ.8ರಂದು ಜರಗಿತು.
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡಿ, ಸುಸಂಸ್ಕೃತವಾದಂತಹ ವಿದ್ಯೆಯನ್ನು ನೀಡಿ ದೇಶದ ಸತ್ಪ್ರಜೆಗಳಾಗಿ ಬಾಳಬೇಕೆಂದು ಹಾರೈಸಿದರು.
ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರು ಸುಮನ ಶಾಲಾ ವರದಿಯನ್ನು ವಾಚಿಸಿದರು. ಆಂಗ್ಲ ಮಾಧ್ಯಮ ಶಾಲಾ ಬಹುಮಾನ ಪಟ್ಟಿಯನ್ನು ಶಿಕ್ಷಕಿ ಅಶ್ವಿನಿ , ಪ್ರಾಥಮಿಕ ಶಾಲಾ ಬಹುಮಾನ ಪಟ್ಟಿಯನ್ನು ಶಿಕ್ಷಕಿ ಚಿತ್ರ , ಪ್ರೌಢಶಾಲಾ ಬಹುಮಾನ ಪಟ್ಟಿಯನ್ನು ಶಿಕ್ಷಕಿ ಪ್ರೀತಿ ಕುಮಾರಿ ವಾಚಿಸಿದರು.
2024 – 25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಾರಾದ ರಶ್ಮಿತಾ, ತನುಶ್ರೀ ರೈ, ದಿಶಾ ಜೆ ರೈ, ಫಾತಿಮಾ ಜಸಿಲ, ಕೀರ್ತನ್, ನವನೀತ, ವೀಕ್ಷಾ, ಕಾರ್ತಿಕ್, ಪವನ್ ಚಂದ್ರ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಎಂಬ ಬಹುಮಾನವನ್ನು ತನುಶ್ರೀ ರೈಗೆ ನೀಡಿ ಗೌರವಿಸಲಾಯಿತು.
ವೃತ್ತಿಯಿಂದ ನಿವೃತ್ತಿ ಆಗುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕ ರಾಮಚಂದ್ರಪ್ಪನವರಿಗೆ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಷಣ್ಮುಖ ದೇವಾ ಪ್ರೌಢಶಾಲೆ ಪೆರ್ಲಂಪಾಡಿಯ ಸಂಚಾಲಕ ಶಿವರಾಮ್ ಭಟ್ ಬೀರ್ಣಕಜೆ, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಲತಾ. ಡಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸದಸ್ಯರಾದ ಗಣರಾಜ ಕುಂಬ್ಳೆ, ಜಿ. ಪರಮೇಶ್ವರ್ ಭಟ್, ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ ಹಿರಣ್ಯ, ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷ ಕೇಶವ ಪ್ರಸಾದ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆ ಮುಖ್ಯ ಗುರು ಸುಮನ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರಾಜಗೋಪಾಲ, ಯನ್ ಉಪಸ್ಥಿತರಿದ್ದರು. ಶಿಕ್ಷಕಿ ಭವಿತಾ ಸ್ವಾಗತಿಸಿ, ಶಿಕ್ಷಕಿ ಲತಾ ವಂದಿಸಿದರು. ಶಿಕ್ಷಕಿ ಶೈಲ ಶ್ರೀ ಮತ್ತು ಶಿಕ್ಷಕಿ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಭರತನಾಟ್ಯ, ಸಂಗೀತ, ಕರಾಟೆ, ಯೋಗ, ತುಳು ಜನಪದ ನೃತ್ಯಗಳು ಮತ್ತು ನರಕಾಸುರ ಮೋಕ್ಷ ಎಂಬ ಯಕ್ಷಗಾನ ಕಥಾ ಭಾಗವನ್ನು ಆಡಿ ತೋರಿಸಲಾಯಿತು.
