ಉಪ್ಪಿನಂಗಡಿ: ಕಾಂಗ್ರೆಸ್‌ನ ಉಪ್ಪಿನಂಗಡಿ ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್ ಮುಖಂಡ 34 ನೆಕ್ಕಿಲಾಡಿ ಗ್ರಾಮದ ಅಸ್ಕರ್ ಅಲಿ ಅವರನ್ನು ನೇಮಕಗೊಳಿಸಿ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ತೌಸೀಫ್ ಯು.ಟಿ. ಆದೇಶಿಸಿದ್ದಾರೆ.
ಮೂರು ಬಾರಿ 34 ನೆಕ್ಕಿಲಾಡಿ ಗ್ರಾ.ಪಂ.ನ ಸದಸ್ಯರಾಗಿ ಆಯ್ಕೆಯಾಗಿದ್ದ ಅಸ್ಕರ್ ಅಲಿಯವರು, ಎರಡು ಅವಧಿಗೆ ಗ್ರಾ.ಪಂ. ಉಪಾಧ್ಯಕ್ಷರಾಗಿ, ಒಂದು ಬಾರಿ ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ, ಈ ಹಿಂದೆ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಇದ್ದ ಕಾಲದಲ್ಲಿ ಬ್ಲಾಕ್ ಕೋಶಾಧಿಕಾರಿಯಾಗಿ, ಅಲ್ಪಸಂಖ್ಯಾತ ಘಟಕದ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ, ಕಾಂಗ್ರೆಸ್‌ನ ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸಂಪುಟ ಕಾರ್ಯದರ್ಶಿಯಾಗಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಶಾಸಕ ಅಶೋಕ್ ಕಮಾರ್ ರೈಯವರ ಸೂಚನೆಯಂತೆ ಅಸ್ಕರ್ ಅಲಿಯವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.
