





ಪುತ್ತೂರು: ಶಿಕ್ಷಣ ಇಲಾಖಾ ವತಿಯಿಂದ ನ.3ರಂದು ನೆಹರುನಗರದ ಸುದಾನ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ನಡೆದ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಬ್ಬರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.



ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವೀಕ್ಷಾ, ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಪ್ರಾಪ್ತಿ ಅವರು ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಸಮಾಜ ವಿಜ್ಞಾನ ಶಿಕ್ಷಕಿ ಶ್ಯಾಮಲಾ ಯಂ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಹಕರಿಸಿದ್ದಾರೆ ಎಂದು ಶಾಲಾ ಮುಖ್ಯಗುರು ಅನ್ನಮ್ಮ ಪಿ.ಎಸ್. ತಿಳಿಸಿದ್ದಾರೆ.














