ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ 2025- ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದಲ್ಲಿ ನ.22ರಂದು ಪುತ್ತೂರು ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಬಂಟೆರೆ ಸೇರಿಗೆ 2025- ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ ನ.10ರಂದು ಜರಗಿತು.

ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ
ಪೂರ್ವಹ್ನ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತೃದಲ್ಲಿ ಪ್ರಾರ್ಥನೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವಸಂತ ಕೆದಿಲಾಯರವರು ಕಾರ್ಯಕ್ರಮ ಸಾಂಗವಾಗಿ ನಡೆಯಲಿ. ಕಾರ್‍ಯಕ್ರಮದ ಯಶಸ್ಸಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಸದಾ ಇದೆ ಎಂದು ಪ್ರಾರ್ಥನೆಗೈದರು. ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು. ಬಳಿಕ ಪುತ್ತೂರು ಸುಂದರರಾಮ್ ಶೆಟ್ಟಿ ಬಂಟರ ಭವನದಲ್ಲಿ ಅಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು.

ನಮ್ಮ ಸಮಾಜದ ಅಭಿವೃದ್ದಿಯೇ ನಮ್ಮ ಗುರಿ- ಕಾವು ಹೇಮನಾಥ ಶೆಟ್ಟಿ
ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ ಬಂಟರ ಸಂಘದ ಆಶ್ರಯದಲ್ಲಿ ನಡೆಯುವ ಬಂಟೆರೆ ಸೇರಿಗೆ ಈ ಬಾರಿ ಅತ್ಯಂತ ಅದ್ದೂರಿಯಾಗಿ ನಡೆಯಲಿದೆ. ಸಂಜೆ ವಿವಿಧ ಕ್ಷೇತ್ರಗಳ ಸಾಧಕರನ್ನು ದರ್ಬೆಯಿಂದ ಪುತ್ತೂರು ಬಂಟರ ಭವನದ ತನಕ ಮೆರವಣಿಗೆಯಲ್ಲಿ ಕರೆತರಲಾಗುವುದು. ಯಕ್ಷಮಾಣಿಕ್ಯ ಚಿಂತನಾ ಹೆಗ್ಡೆ ಮಾಳಕೋಡ್‌ರವರಿಂದ ಯಕ್ಷ ನಾಟ್ಯ ವೈಭವ ನಡೆಯಲಿದೆ, ಬಳಿಕ ವಿವಿಧ ಕ್ಷೇತ್ರಗಳ ಸಾಧಕರಿಗೆ ಚಿನ್ನದ ಪದಕ ಪ್ರಶಸ್ತಿ ಪ್ರದಾನ ನಡೆಯಲಿದೆ. ಒಟ್ಟು ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ, ಸುಂದರವಾಗಿ ಮೂಡಿಬರಲಿದೆ, ಕಾರ್ಯಕ್ರಮದಲ್ಲಿ ಬಂಟ ಭಾಂದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್‍ಯಕ್ರಮಕ್ಕೆ ಹೊಸ ಮೆರಗು ನೀಡಬೇಕೆಂದರು. ತಾಲೂಕು ಬಂಟರ ಸಂಘದ ಸಾಧನೆಗಳ ಬಗ್ಗೆ ಮಾತೃ ಸಂಘದ ಮಹಾಸಭೆಯಲ್ಲೂ ಮೆಚ್ಚುಗೆಯ ಮಾತುಗಳು ಬಂದಿದೆ, ನಮ್ಮಲ್ಲಿ ಯಾವುದೇ ರಾಜಕೀಯ ಇಲ್ಲ, ನಾವೆಲ್ಲ ಬಂಟರ ಸಂಘದಲ್ಲಿ ಸಮಾನರು, ಇಲ್ಲಿ ಶ್ರೀಮಂತ-ಬಡವ ಎಂಬ ಭೇದ ಇಲ್ಲ, ನಮ್ಮ ಸಮಾಜದ ಅಭಿವೃದ್ದಿಯೇ ನಮ್ಮ ಗುರಿಯಾಗಿದೆ ಎಂದು ಹೇಳಿದ ಅವರು, ಮುಂದೆ ಬಂಟರ ಸಂಘಕ್ಕೆ ಸರಕಾರದಿಂದ ಮಂಜೂರಾದ ಜಾಗದಲ್ಲಿ ಎಲ್ಲಾ ಬಂಟರನ್ನು ಸೇರಿಸಿ, ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ ಎಂದರು.

ಬಂಟ ಬಾಂಧವರು ಪೂರ್ಣ ಸಹಕಾರ ಇರಬೇಕು- ಕುಂಬ್ರ ದುರ್ಗಾಪ್ರಸಾದ್ ರೈ
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈಯವರು ಮಾತನಾಡಿ ತಾಲೂಕು ಬಂಟರ ಸಂಘದ ಸಮರ್ಥ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಕಾರ್‍ಯಕ್ರಮಗಳು ಜಿಲ್ಲಾ ಮಟ್ಟದಲ್ಲಿ ಹೆಸರನ್ನು ಪಡೆದಿದೆ. ಮೊನ್ನೆ ಜರಗಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಾಸಭೆಯಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಸಾಧನೆಯ ಬಗ್ಗೆ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿಯವರು ಪ್ರಶಂಶೆಯನ್ನು ವ್ಯಕ್ತಪಡಿಸಿದ್ದಾರೆ, ಬಂಟರ ಸಂಘಕ್ಕೆ ಶಾಸಕ ಅಶೋಕ್ ಕುಮಾರ್ ರೈ ಮೂಲಕ ಸರಕಾರದಿಂದ ಮಂಜೂರಾದ ಜಾಗದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಮಾಡಬೇಕೆಂಬ ಕಾವು ಹೇಮನಾಥ ಶೆಟ್ಟಿಯವರ ಕನಸು ಇದೆ, ಅದಕ್ಕೆ ಬಂಟ ಬಾಂಧವರು ಪೂರ್ಣ ಸಹಕಾರ ಇರಬೇಕು ಎಂದು ಹೇಳಿದರು.

ಸಂಘಟನೆಯನ್ನು ಬಲಪಡಿಸಬೇಕು- ಬೂಡಿಯಾರ್ ರಾಧಾಕೃಷ್ಣ ರೈ
ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈಯವರು ಮಾತನಾಡಿ ಗ್ರಾಮ ಗ್ರಾಮಗಳಲ್ಲಿ ಬಂಟ ಬಾಂಧವರನ್ನು ಒಗ್ಗೂಡಿಸುವ ಕೆಲಸವನ್ನು ಮಾಡಬೇಕು, ಆಮೂಲಕ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.

ಬಂಟ ಸಮಾಜಕ್ಕೆ ತನ್ನಿಂದ ಯಾವಾಗಲೂ ಪ್ರೋತ್ಸಾಹ ಇದೆ- ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿ
ಬಂಟರ ಸಂಘದ ಮಾಜಿ ಅಧ್ಯಕ್ಷ ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿಯವರು ಮಾತನಾಡಿ ನಾನು ಬಂಟರ ಸಂಘದ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಬಂಟರ ಕ್ಷೇಮನಿಧಿಗಾಗಿ 33 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ, ಠೇವಣಿಯನ್ನು ಇಟ್ಟಿದ್ದೇನೆ, ಆಮೂಲಕ ಬಂಟ ಸಮಾಜಕ್ಕೆ ತನ್ನಿಂದ ಯಾವಾಗಲೂ ಪ್ರೋತ್ಸಾಹ ಇದೆ ಎಂದು ಹೇಳಿದರು.

ಮಾದರಿ ಕಾರ್ಯಕ್ರಮಗಳ ಮೂಲಕ ಹೆಸರು- ದಂಬೆಕ್ಕಾನ ಸದಾಶಿವ ರೈ
ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈಯವರು ಮಾತನಾಡಿ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಬಂಟರ ಸಂಘ ಮಾದರಿ ಕಾರ್ಯಕ್ರಮಗಳ ಮೂಲಕ ಹೆಸರನ್ನು ಪಡೆದಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ಪೂರ್ಣ ಸಹಕಾರ ಇದೆ- ಗೀತಾ ಮೋಹನ್ ರೈ
ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈಯವರು ಮಾತನಾಡಿ ಬಂಟೆರೆ ಸೇರಿಗೆ ಕಾರ್ಯಕ್ರಮಕ್ಕೆ ನಮ್ಮ ಪೂರ್ಣ ಸಹಕಾರ ಇದೆ ಎಂದರು.
ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿರ್ದೇಶಕ ಜಯಪ್ರಕಾಶ್ ರೈ ನೂಜಿಬೈಲು, ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜ, ಉಪಾಧ್ಯಕ್ಷರಾದ ರಮೇಶ್ ರೈ ಡಿಂಬ್ರಿ, ಸುಭಾಸ್ ಕುಮಾರ್ ಶೆಟ್ಟಿ ಆರುವಾರು, ಜೊತೆ ಕಾರ್‍ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ, ನಿರ್ದೇಶಕರುಗಳಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ನಿತಿನ್ ಪಕ್ಕಳ ಮರೀಲ್, ಸದಾಶಿವ ರೈ ಸೂರಂಬೈಲು, ಇಂದುಶೇಖರ್ ಶೆಟ್ಟಿ, ದಯಾನಂದ ರೈ ಕೊರ್ಮಂಡ, ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಶಶಿರಾಜ್ ರೈ ಮುಂಡಾಲಗುತ್ತು, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ತಾಲೂಕು ಮಹಿಳಾ ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ಕುಸುಮಾ ಪಿ.ಶೆಟ್ಟಿ ಕೆರೆಕ್ಕೋಡಿ, ಕೋಶಾಧಿಕಾರಿ ಅರುಣಾ ರೈ, ಅನಿತಾ ಹೇಮನಾಥ ಶೆಟ್ಟಿ ಕಾವು, ವತ್ಸಲಾ ಪಿ.ಶೆಟ್ಟಿ, ತಾಲೂಕು ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್‍ಯದರ್ಶಿ ರಂಜಿನಿ ಶೆಟ್ಟಿ, ಕಾರ್ತಿಕ್ ರೈ ಬೆಳಿಯೂರುಕಟ್ಟೆ, ರವಿಚಂದ್ರ ರೈ, ಭಾಸ್ಕರ್ ರೈ ಉಪಸ್ಥಿತರಿದ್ದರು.
ತಾಲೂಕು ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ನಿತ್ಯಾನಂದ ಶೆಟ್ಟಿ ಕಾರ್‍ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here