ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಸಾ ಸಂಸ್ಥಾನಂ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆ ಹಾಗೂ ಮಂಗಳೂರು ಪಬ್ಲಿಕ್ ಪದವಿ ಪೂರ್ವ ಕಾಲೇಜು ಹಾಸನ ಇದರ ಆಶ್ರಯದಲ್ಲಿ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತೀಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಹನುಮಗಿರಿ ಈಶ್ವರಮಂಗಲ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ದೇಲಂಪಾಡಿ ರಘುನಾಥ ರೈ ಎಸ್.ಕೆ ಮತ್ತು ಮಲ್ಲಿಕಾ ಆರ್.ರೈಯವರ ಪುತ್ರಿ ಸೃಷ್ಟಿ ಎಸ್.ಆರ್ರವರು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು ಉತ್ತರಪ್ರದೇಶದಲ್ಲಿ ನಡೆಯುವ ಎಸ್.ಜಿ.ಎಫ್.ಐ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು ಇವರಿಗೆ ವಿದ್ಯಾಸಂಸ್ಥೆ ಹಾಗೂ ಶಿಕ್ಷಕ ರಕ್ಷಕ ಸಂಘ ಮತ್ತು ಪ್ರಾಂಶುಪಾಲರು , ಆಡಳಿತ ಮಂಡಳಿ ವತಿಯಿಂದ ಸನ್ಮಾನ ಕಾರ್ಯಕ್ರಮ ನ.10 ರಂದು ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸಂಸ್ಥೆಯ ವಿದ್ಯಾರ್ಥಿನಿ ಕರ್ನೂರು ಪ್ರಭಾಕರ ಪಿ ಮತ್ತು ವಸಂತಿ ಸಿ.ಕೆರವರ ಪುತ್ರಿ ಅನಘ ಪಿ.ರವರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ್ ಮತ್ತು ಹರ್ಷಿತ್ರವರ್ನು ಕೂಡ ಈ ಸಂದರ್ಭದಲ್ಲಿ ಗೌರವಿಸಲಾಯಿತು. ಆರಂಭದಲ್ಲಿ ಸೃಷ್ಟಿ ಎಸ್.ಆರ್ರವರನ್ನು ಮೆರವಣಿಗೆಯ ಮೂಲಕ ಈಶ್ವರಮಂಗಲ ಪೇಟೆಗೆ ಕರೆ ತರಲಾಯಿತು. ಈ ಸಂದರ್ಭದಲ್ಲಿ ಈಶ್ವರಮಂಗಲದ ಎಂ.ಜಿ ಟೆಕ್ಸ್ಟೈಲ್ನ ಗುರುಕಿರಣ್, ಪೂರ್ಣಚಂದ್ರ ರೈ ನೆಲ್ಲಿತ್ತಡ್ಕ, ವಿನೋದ್ ರೈ ಅನಿಲೆರವರು ಶಾಲು, ಹೂ ಹಾರ ಹಾಕಿ ಗೌರವಿಸಿದರು. ಅಲ್ಲಿಂದ ವಿದ್ಯಾಸಂಸ್ಥೆಗೆ ತೆರಳಿದರು.
ಆಡಳಿತ ಮಂಡಳಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಮಾತನಾಡಿ, ಬಹಳಷ್ಟು ಸಂತೋಷವಾಗುತ್ತಿದೆ. ಶಾಲೆ ಆರಂಭವಾಗಿ 15 ವರ್ಷಗಳು ಕಳೆದಿದ್ದು ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸುತ್ತಿರುವುದು ಖುಷಿ ಕೊಟ್ಟಿದೆ. ಇದರ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿಯ ಮಾರ್ಗದರ್ಶನ ಪ್ರೋತ್ಸಾಹ ಇದೆ. ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನ ಇಲ್ಲಿ ಬಹಳ ಮುಖ್ಯವಾಗುತ್ತದೆ ಆದ್ದರಿಂದ ಶಿಕ್ಷಕ ವೃಂದಕ್ಕೆ ಹಾಗೂ ಮಾರ್ಗದರ್ಶನ ನೀಡಿದ ಸರ್ವರಿಗೂ ಅಭಿನಂದನೆ ಸಲ್ಲಿಸುತ್ತಿದ್ದೇನೆ. ಮುಂದಿನ ಕ್ರೀಡಾಕೂಟದಲ್ಲಿ ಸೃಷ್ಟಿ ಉತ್ತಮ ಸಾಧನೆ ಮಾಡಲಿ ಎಂಬ ಹಾರೈಕೆಯೊಂದಿಗೆ ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಹಾಗೇ ಅನಘರವರು ಮುಂದಿನ ದಿನಗಳಲ್ಲಿ ಸಾಧನೆ ಮಾಡಲು ಭಗವಂತನ ಆಶೀರ್ವಾದ ಇರಲಿ ಎಂದು ಹೇಳಿ ಶುಭ ಹಾರೈಸಿದರು.
ಸಂಚಾಲಕ ಶಿವರಾಮ ಪಿರವರು ವಿದ್ಯಾಸಂಸ್ಥೆಯ ಪರವಾಗಿ ಕ್ರೀಡಾಪಟುವಿಗೆ ಶಾಲು, ಪೇಟಾ, ಹಾರ, ಸ್ಮರಣಿಕೆ, ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಆಡಳಿತ ಸಮಿತಿ ಸದಸ್ಯ ಜಯರಾಜ್ ರೈ ಸುಳ್ಯಪದವುರವರು ಮಾತನಾಡಿ, ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ನಮ್ಮ ಊರಿಗೆ ಕೀರ್ತಿ ತಂದಿದೆ. ಇವರಿಂದ ಇನ್ನಷ್ಟು ಸಾಧನೆಗೆಳು ಮೂಡಿಬರಲಿ ಎಂದು ಹೇಳಿ ಶುಭ ಹಾರೈಸಿದರು.
ಶಾಲಾ ಪ್ರಾಂಶುಪಾಲ ಶಾಮಣ್ಣರವರು ಮಾತನಾಡಿ, ಕಳೆದ 15 ವರ್ಷಗಳಿಂದ ನಮ್ಮ ಶಾಲಾ ನಡೆಯುತ್ತಾ ಬಂದಿದ್ದು ನಮ್ಮ ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಉತ್ತಮ ತರಬೇತು ನೀಡುತ್ತಿದ್ದಾರೆ ಶಿಕ್ಷಕ ವೃಂದಕ್ಕೆ ಅಭಿನಂದನೆಗಳೊಂದಿಗೆ ಸೃಷ್ಟಿಯ ಸಾಧನೆ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಮುಂದಿನ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮೂಡಿಬರಲಿ ಎಂದು ಹೇಳಿ ಶುಭ ಹಾರೈಸಿದರು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಮಾತನಾಡಿ, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಈ ಸಂಸ್ಥೆಗೆ ಗೌರವ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಹಾಗೇ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆಗಳು ವಿದ್ಯಾರ್ಥಿಗಳಿಂದ ಮೂಡಿಬರಲಿ ಎಂದು ಹೇಳಿ ಶುಭ ಹಾರೈಸಿದರು. ಶಿಕ್ಷಕ,ರಕ್ಷಕ ಸಂಘ ಹಾಗೆ ಶಿಕ್ಷಕ ವೃಂದದವರು ಗೌರವಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರುಗಳಾದ ಜಯರಾಜ ರೈ ಸುಳ್ಯಪದವು, ಶಿವರಾಮ ಶರ್ಮ ಕತ್ರಿಬೈಲು, ಸೂರ್ಯನಾರಾಯಣ ಭಟ್, ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಚಂದ್ರಶೇಖರ ಭಂಡಾರಿ, ಸತ್ಯಪ್ರಕಾಸ್ ಕುಂಟಿಕಾನ, ಲತಾ ಡಿ.ಕೆ, ಸೃಷ್ಟಿ ಎಸ್.ಆರ್ ರೈಯವರ ಪೋಷಕರಾದ ರಘುನಾಥ ರೈ ಎಸ್.ಕೆ ಮತ್ತು ಮಲ್ಲಿಕಾ ರೈ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ಎ ಸ್ವಾಗತಿಸಿ, ವಂದಿಸಿದರು.