ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ ಕಛೇರಿ ಕಟ್ಟಡದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಕಟ್ಟಡದ ಉದ್ಘಾಟನಾ ಸಮಾರಂಭ ನ.11ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಪುತ್ತೂರು ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಹಾಗೂ ಪುತ್ತೂರು ಉಪವಿಭಾಗದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಭರತ್ ಬಿ.ಎಂ. ಉಪಸ್ಥಿತರಿರಲಿದ್ದಾರೆ. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮುನತ್ತುಲ್ ಮೆಹ್ರಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.