





ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ (ಪ.ಪೂ.) ಆಯೋಜಿಸಿದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಜ್ ಶೆಟ್ಟಿಯವರನ್ನೊಳಗೊಂಡ ತಂಡವು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.


ಇವರ ತಂಡವು ಬೆಂಗಳೂರು ಉತ್ತರ ತಂಡವನ್ನು ಫೈನಲ್ನಲ್ಲಿ ಮಣಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಗೋಪಿನಾಥ್ ಹಾಗೂ ನಿಖಿಲ್ ಗಟ್ಟಿ ತರಬೇತಿಯನ್ನು ನೀಡಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲ ಎಚ್.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















