





ಕಡಬ: ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿದು ಬಂದಿದೆ.


ಮೃತ ಯುವಕನನ್ನು ಕಲ್ಲುಗುಡ್ಡೆ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25ವ) ಎಂದು ಗುರುತಿಸಲಾಗಿದೆ.





ಜುಬಿನ್ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು, ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.










