





ಪುತ್ತೂರು: ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಕಂಬಳಬೆಟ್ಟು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಓಜಾಲ ಇದರ ಸಹಭಾಗಿತ್ವದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕಬಕ ಓಜಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.8ರಂದು ನಡೆಯಿತು.



ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ ಬಾಯರ್‌ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇಡುಕ್ಕಿದು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಪದ್ಮನಾಭ ಸಪಲ್ಯರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮಕ್ಕೆ ಬಂಟವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ ಎನ್ ಆಗಮಿಸಿ ಮೆಚ್ಚುಗೆಯ ಮಾತುಗಳ್ನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ಓಜಾಲ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಣೇಶ್ ಪಾಂಡೆಲು, ಕುಡಿಪಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಸೋಮಶೇಖರ ಪೂಜಾರಿ, ಎಸ್ ಡಿ ಎಂ ಸಿ ಯ ಮಾಜಿ ಅಧ್ಯಕ್ಷರಾದ ಚಿದಾನಂದ ಪೆಲತಿಂಜ, ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟವಾಳ ಘಟಕದ ಕಾರ್ಯದರ್ಶಿ ಯತೀಶ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಸುಮಯ್ಯ, ಕುದ್ದುಪದವು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನವೀನ್, ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.





ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ ಮುಖ್ಯ ಶಿಕ್ಷಕರು,ತೀರ್ಪುಗಾರರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಓಜಾಲ ಶಾಲೆಯ ಮುಖ್ಯ ಶಿಕ್ಷಕರಾದ ಸಂಜೀವ ಮಿತ್ತಳಿಕೆ ಅತಿಥಿಗಳನ್ನು ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಕುಶಲ ಕುಮಾರಿ ವಂದಿಸಿದರು. ಸಹ ಶಿಕ್ಷಕಿ ವಿಲ್ಮಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಕಂಬಳ ಬೆಟ್ಟು ಕ್ಲಸ್ಟರ್ ಮಟ್ಟದ ಈ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಒಂಬತ್ತು ಶಾಲೆಗಳಿಂದ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಿರಿಯರ ವಿಭಾಗದಲ್ಲಿ ಓಜಾಳ ಶಾಲೆ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಕಿರಿಯ ವಿಭಾಗದಲ್ಲಿ ಅಳಕ್ಕೆ ಮಜಲು ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಹಿರಿಯರ ವಿಭಾಗದಲ್ಲಿ ಮಿತ್ತೂರು ಶಾಲೆ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರೆ, ಹಿರಿಯರ ವಿಭಾಗದಲ್ಲಿ ಓಜಾಳ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.









