ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಮಾನ್ವಿ ಡಿಸೋಜ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪುತ್ತೂರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ “ಕ್ರೀಡಾ ದರ್ಶನಿ 2025” ತಾಲೂಕು ಮಟ್ಟಡ ಕ್ರೀಡಾಕೂಟದಲ್ಲಿ 14ರ ವಯೋಮಾನದ ವಿಭಾಗದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ 8ನೇ ತರಗತಿಯ ಮಾನ್ವಿ ಡಿಸೋಜ (ಮಾರ್ಟಿನ್ ಡಿಸೋಜಾ ಮತ್ತು ಶಾಂತಿ ಡಿಸೋಜರವರ ಪುತ್ರಿ) ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಲೋಬೋರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ದೀಕ್ಷಾ ಪಿ ಎನ್ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here