





ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು.


ಕಾಣಿಯೂರು ಶಾಲಾ ಶಿಕ್ಷಕಿ ಸರೋಜ ಪಿ.ಕೆ ಅವರು ಮಾತನಾಡಿ, ದೇಶದ ಮೊದಲ ಶಿಕ್ಷಣ ಸಚಿವರಾದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆ. ಅದನ್ನು ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಅವರೊಬ್ಬರು ಸ್ವಾತಂತ್ರ್ಯ ಹೋರಾಟಗಾರರು ಹೌದು ಎಂದು ಹೇಳಿದರು. ಶಾಲಾ ಮುಖ್ಯಗುರು ಬಾಲಕೃಷ್ಣ ಕೆ ಪ್ರಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.





ಮೌನ ಪ್ರಾರ್ಥನೆ
ಈ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಬಾಂಬ್ ಬ್ಲಾಸ್ಟ್ ನಲ್ಲಿ ಮಡಿದವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಲಾಯಿತು.










