ಬೆಟ್ಟಂಪಾಡಿ: ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ನ.11 ನಡೆಯಿತು.

ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮನೋಹರ್ ಇವರು ಧ್ವಜಾರೋಹಣಗೈದು, ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀರಂಗನಾಥ ರೈ ಗುತ್ತು ಧ್ವಜ ವಂದನೆ ಸ್ವೀಕರಿಸಿದರು. ನವೋದಯ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಸಂತೋಷ್ ಕುಮಾರ್ ಕಾನ ಇವರು ಮಾತನಾಡುತ್ತಾ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಒಂದು ಪ್ರಮುಖ ಅಸ್ತ್ರ. ಈ ವಿದ್ಯಾಸಂಸ್ಥೆಯು ಈ ಎಲ್ಲಾ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಇಲ್ಲಿನ ಮಕ್ಕಳು ಭಾಗ್ಯಶಾಲಿಗಳು ಎಂದರು. ವೇದಿಕೆಯಲ್ಲಿ ಶಕ್ತಿ ಕೇಂದ್ರ ನಿಡ್ಪಳ್ಳಿ ಇದರ ಅಧ್ಯಕ್ಷ ಸಂತೋಷ್ ಕುಮಾರ್ ಬೇರಿಕೆ, ಸೀತಾರಾಮ ಗೌಡ ಮಿತ್ತಡ್ಕ, ಶಿಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ರೈ ಬೈಲಾಡಿ ಉಪಸ್ಥಿತರಿದ್ದರು. ಮುಖ್ಯಗುರು ರಾಜೇಶ್ ಎನ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸುದೀಪ್ ವಂದಿಸಿದರು. ಕು.ಭಾಗ್ಯಶ್ರೀ ರೈ ಹಾಗೂ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.